ಕೆಕೆಆರ್ ತಂಡದ ಮುಂದಿನ ನಾಯಕ ಯಾರು?

0
55

ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್ ಮೂರನೇ ವಾರದಿಂದ ಮುಂದುವರಿಯಲಿದೆ. ಏಪ್ರಿಲ್ 9ರಂದು ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಟೂರ್ನಿಯನ್ನು ಮುಂದೂಡಲಾಗಿತ್ತು.


ಹೀಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಯುಎಇಯಲ್ಲಿ ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಬಹುತೇಕ ವಿದೇಶಿ ಆಟಗಾರರ ಅಲಭ್ಯತೆ ಉಂಟಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲಿಯೂ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡದ ಆಟಗಾರರು ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಅಲಭ್ಯರಾಗುವುದು ಖಚಿತ ಎನ್ನಲಾಗುತ್ತಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸಂಕಷ್ಟ ಎದುರಾಗಿದೆ. ಹೌದು ಕೆಕೆಆರ್ ತಂಡವನ್ನು ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್ ಮುನ್ನಡೆಸುತ್ತಿದ್ದರು ಹಾಗೂ ತಂಡದ ಪ್ರಮುಖ ಆಟಗಾರ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾದವರು. ಹೀಗಾಗಿ ಈ ಇಬ್ಬರು ಆಟಗಾರರು ಅಲಭ್ಯರಾದರೆ ತಂಡಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಈ ಕುರಿತು ಮಾತನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಬ್ರೆಂಡನ್ ಮೆಕಲಮ್ ‘ಐಪಿಎಲ್ ಮುಂದುವರಿಯುವ ಸಂದರ್ಭಕ್ಕೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಇದ್ದು ನಾಯಕ ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಂಡವನ್ನು ಸೇರಿಕೊಳ್ಳದೆ ಹೋದರೆ ತಂಡದ ಯುವ ಆಟಗಾರರಾದ ಶುಬ್ಮನ್ ಗಿಲ್ ಅಥವಾ ನಿತೀಶ್ ರಾಣಾ ಮುಂದೆ ಬರಬೇಕು’ ಎಂದಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದರ ಮೂಲಕ ಇಯಾನ್ ಮಾರ್ಗನ್ ಅಲಭ್ಯರಾದರೆ ಶುಬ್ಮನ್ ಗಿಲ್ ಅಥವಾ ನಿತೀಶ್ ರಾಣಾ ತಂಡದ ನಾಯಕತ್ವವನ್ನು ವಹಿಸಿಕೊಳ್ಳಬೇಕು ಎಂದು ಮೆಕ್ಕಲಮ್ ಪರೋಕ್ಷವಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here