ಕೆಟ್ಟ ದಾಖಲೆ ಅಳಿಸಿಹಾಕಿದ ಹೈದರಾಬಾದ್

Date:

 

2021ರ ಐಪಿಎಲ್ ಟೂರ್ನಿಯ ಆರಂಭದ ಪಂದ್ಯಗಳು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಬಹಳಷ್ಟು ಹಿನ್ನಡೆಯನ್ನುಂಟು ಮಾಡಿದ್ದವು. ಸತತ 3 ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಲ್ಕನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಈ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 120 ರನ್ ಗಳಿಸಿತು. 121 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 9 ವಿಕೆಟ್‍ಗಳ ಗೆಲುವು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಖಾತೆಯನ್ನು ತೆರೆಯಿತು. ಈ ಮೂಲಕ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದ್ದು ಮಾತ್ರವಲ್ಲದೆ ಸನ್ ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ನೆಲದಲ್ಲಿ ತಾನು ಹೊಂದಿದ್ದ ಅತಿಕೆಟ್ಟ ದಾಖಲೆಯೊಂದನ್ನು ಇಂದು (ಏಪ್ರಿಲ್ 21) ಅಳಿಸಿಹಾಕಿದೆ.

 

 

ಹೌದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಇದುವರೆಗೂ ಯಾವುದೇ ಐಪಿಎಲ್ ಪಂದ್ಯವನ್ನು ಗೆದ್ದಿರಲಿಲ್ಲ. ಸನ್ ರೈಸರ್ಸ್ ಹೈದರಾಬಾದ್ ತಂಡ ಚೆನ್ನೈನಲ್ಲಿ ಆಡಿದ್ದ ಮೊದಲ 3 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸತತವಾಗಿ ಸೋತಿತ್ತು. ನಂತರ ಚೆನ್ನೈ ನೆಲದಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿಯೂ ಸಹ ಸನ್ ರೈಸರ್ಸ್ ಹೈದರಾಬಾದ್ ತಂಡ ಸೋತಿತ್ತು. ಬುಧವಾರ ( ಏಪ್ರಿಲ್ 21) ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸುವುದರ ಮೂಲಕ ಚೆನ್ನೈ ನೆಲದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸುವುದರ ಜೊತೆಗೆ ತನ್ನ ಕೆಟ್ಟ ದಾಖಲೆಯನ್ನು ಅಳಿಸಿಹಾಕಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...