ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಯಾವುದೇ ರನ್ ಗಳಿಸದೆ ಜೇಮ್ಸ್ ಆ್ಯಂಡರ್ಸನ್ ಮೊದಲನೇ ಎಸೆತಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಹೀಗೆ ಜೇಮ್ಸ್ ಆ್ಯಂಡರ್ಸನ್ ಎಸೆತದಲ್ಲಿ ಡಕ್ ಔಟ್ ಆಗುವುದರ ಮೂಲಕ ವಿರಾಟ್ ಕೊಹ್ಲಿ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟಕ್ಕ ಔಟ್ ಆಗಿರುವ ಭಾರತದ ನಾಯಕ ಎಂಬ ಕೆಟ್ಟ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಇದುವರೆಗೂ ಟೆಸ್ಟ್ ಇತಿಹಾಸದಲ್ಲಿ 9 ಬಾರಿ ಡಕ್ ಔಟ್ ಆಗಿದ್ದು ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ.