ರಾಜ್ಯದ ಪ್ರವಾಹಪೀಡಿತರಿಗೆ ಇಲ್ಲಿಯವರಗೂ ಸರಿಯಾದ ಪರಿಹಾರ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ. ಕೇವಲ 10 ಸಾವಿರ ಕೊಟ್ಟು ಪರಿಹಾರ ಒದಗಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಈ ಹಣದಲ್ಲೂ ಕೂಡ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಅವರು ಜಾಮೀನು ಪಡೆದು ಬಿಡುಗಡೆ ಹೊಂದಿದ್ದು, ಅವರು ಬೆಂಗಳೂರಿಗೆ ಬರಲಿದ್ದಾರೆ. ಅವರನ್ನು ಪಕ್ಷ ಸ್ವಾಗತಿಸುತ್ತದೆ ಎಂದರು. ಸದ್ಯಕ್ಕಂತೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನನ್ನ ಪ್ರಕಾರ ಅಸಾಧ್ಯ. ಅಲ್ಲದೆ ಈ ವಿಷಯವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.