ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ, ಹೈಕಮಾಂಡ್ ಏನು ಮಾಡುತ್ತೆ ಎಂದು ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಸಮುದಾಯದವರು ಸ್ಥಾನ ಕೇಳೋದು ತಪ್ಪಲ್ಲ ಯಾವ ಸಮುದಾಯಕ್ಕೆ ಕೊಡಬೇಕೆಂದು ವರಿಷ್ಠರಿಗೆ ಗೊತ್ತಿದೆ. ಶಾಸಕರು, ಮುಖಂಡರು ತಮ್ಮ ತಮ್ಮ ಅಭಿಪ್ರಾಯ ಹೇಳುತ್ತಾರೆ ಯಾಕಂದ್ರೆ ಶಾಸಕರ ಹಾಗೂ ಮುಖಂಡರ ಅಭಿಪ್ರಾಯಗಳು ಕೂಡ ಮುಖ್ಯ ಎಂದು ಹೇಳಿದರು.
ಇನ್ನೂ ನಾವು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದ್ದೆವು. ರಾಜಕೀಯವಾಗಿ ಚರ್ಚೆ ಮಾಡಲಾಯಿತು. ಸೌಹಾರ್ದಯುತವಾಗಿ ಚರ್ಚೆ ಮಾಡಲಾಯ್ತು. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಪ್ರಸ್ತಾಪ ಮಾಡಲಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಅವರವರು ಅವರವರ ಅಭಿಪ್ರಾಯ ಹೇಳ್ತಾರೆ. ಆದರೆ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ !
Date: