ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ.
ಪ್ರಮುಖ ಆರೋಪಿಗಳಾದ ಮುಸ್ಸಾವೀರ್ ಹುಸೈನ್ ಶಾಜಿಬ್ (30) ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹ (30) ಪತ್ತೆಗೆ ಸಹಕಾರಿಯಾಗಬಲ್ಲ ಸುಳಿವಿದ್ದಲ್ಲಿ ಹಂಚಿಕೊಳ್ಳುವಂತೆ ಎನ್ಐಎ ಕೋರಿದೆ.
ಕೆಫೆ ಸ್ಫೋಟ ಪ್ರಕರಣ: ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ
Date: