No menu items!
16.3 C
Munich
Thursday, April 30, 2026

ಕೆಲ ನಿಯಮಗಳೊಂದಿಗೆ ಗಣೇಶೋತ್ಸವ ಆಚರಣೆಗೆ ಅವಕಾಶ.. ಇಲ್ಲಿದೆ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ..

Must read

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿತ್ತು.‌ ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಇದೀಗ ಸರ್ಕಾರ ಕೆಲ ನಿಯಮಗಳೊಂದಿಗೆ ಗಣೇಶ ಹಬ್ಬ ಆಚರಣೆಗೆ ಅವಕಾಶ ಮಾಡಿಕೊಟ್ಟಿದೆ.

ಹೌದು, ಕೊರೊನಾ ಸಮಯದಲ್ಲೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ ಅವಕಾಶ ನೀಡಿದ್ದು, ಕೆಲ ನಿಯಮಗಳನ್ನು ಇಟ್ಟಿದೆ‌‌. ಈ ಹಿಂದೆ
ಗಣೇಶ ಹಬ್ಬವನ್ನು ಆಚರಿಸಲು ಹೊರಡಿಸಿದ್ದ ಮಾರ್ಗ ಸೂಚಿಯಲ್ಲಿ ಬದಲಾವಣೆ ಮಾಡಿದೆ.

ಸಿಎಂ ಕಚೇರಿಯ ಅಧಿಕೃತ ಟ್ಟೀಟ್‌ ಖಾತೆಯಲ್ಲಿ ಗಣೇಶ ಚತುರ್ಥಿ ಆಚರಣೆಯ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕೊರೋನಾ ಹರಡುವಿಕೆ ನಿಯಂತ್ರಣದೊಂದಿಗೆ
ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇನ್ನೂ ಸರ್ಕಾರ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನಿದೆ ಅನ್ನೋದನ್ನು ನೋಡೋದಾದರೆ,

  1. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ ಅಥವಾ ಖಾಸಗಿ ಸರ್ಕಾರಿ, ಸಾರ್ವಜನಿಕರ ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಣೆ ಮಾಡಬಹುದು.
  2. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.
  3. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್‌ ಕಾರ್ಪೊರೇಷನ್‌/ ಸ್ಥಳೀಯ ಆಡಳಿತದಿಂದ ಪೂರ್ವಾನುಪತಿ ಪಡೆಯಬೇಕು.
  4. ಜೊತೆಗೆ ಒಂದು ವಾರ್ಡ್‌ಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕವಾಗಿ ಒಂದು ಗಣೇಶ ಪ್ರತಿಷ್ಟಾಪನೆ ಮಾಡಲು ಪ್ರೋತ್ಸಾಹಿಸುವುದು.ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು
  5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅವಕಾಶ ಇರುವುದಿಲ್ಲ.
  6. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
  7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ವಿಸರ್ಜಿಸಬಹುದು.

ಕೊರೊನಾದ ಸಮಯದಲ್ಲಿ ಆರೋಗ್ಯಕರ ರೀತಿಯಲ್ಲಿ ‌ಮತ್ತು ಪರಿಸರ ಸ್ನೇಹಿ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸರ್ಕಾರ‌ಮನವಿ ಮಾಡಿದೆ‌. ಜೊತೆಗೆ ಹಬ್ಬದ ಪ್ರಯುಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article