ಕೆ.ಆರ್.ಪೇಟೆಯಲ್ಲಿ ಉಪಚುನಾವಣೆಗೆ ವಿಜಯೇಂದ್ರ ಕಣಕ್ಕಿಳಿಯುತ್ತಾರಾ ? ಅವರು ಹೇಳಿದ್ದೇನು ಗೊತ್ತೇ.. ?

admin
By admin
0 Min Read

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂಬ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ನಾನು ಬದ್ಧ ಎಂದರು.

ಕೆ.ಆರ್.ಪೇಟೆಯಿಂದ ಕಣಕ್ಕಿಳಿಯುತ್ತೀರ ಎಂಬ ಮಾಧ್ಯಮದವರ ಪ್ರಶ್ನೆಗೆ ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ.ಇಲ್ಲಿ ನನ್ನ ಅಭಿಪ್ರಾಯಕ್ಕಿಂತ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಮುಖ್ಯವಾಗುತ್ತದೆ. ವರಿಷ್ಠರು ಏನು ಸೂಚನೆ ಕೊಡುತ್ತಾರೋ ಅದಕ್ಕೆ ಎಲ್ಲರೂ ತಲೆಬಾಗಬೇಕಾಗುತ್ತದೆ ಎಂದು ಹೇಳಿದರು.

Share This Article