ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಧುಗಿರಿಯ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅಧಿಕಾರ ವಹಿಸಿಕೊಂಡಿದ್ದಾರೆ.ಕೋರ್ಟ್ ಆದೇಶದ ಮೇರೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಸೂಪರ್ ಸೀಡ್ ಮಾಡಿದ್ದ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ.
ಸಹಕಾರ ಸಂಘಗಳ ಅಪರ ನಿಬಂಧಕರ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಇತ್ತೀಚೆಗೆ ಡಿಸಿಸಿ ಬ್ಯಾಂಕ್ ಅನ್ನು ಸಮ್ಮಿಶ್ರ ಸರ್ಕಾರ ಸೂಪರ್ ಸೀಡ್ ಮಾಡಿದ್ದು, ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಜಣ್ಣ ಅವರು ಕೋರ್ಟ್ ಮೊರೆ ಹೋಗಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸೂಪರ್ ಸೀಡ್ ಆದೇಶಕ್ಕೆ ತಡೆ ನೀಡಿದೆ.
ಸಮ್ಮಿಶ್ರ ಸರ್ಕಾರ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದ ಸಂದರ್ಭದಲ್ಲಿ ತಾವು ಕೆಲವೇ ದಿನಗಳಲ್ಲಿ ಮತ್ತೆ ಅಧಿಕಾರ ವಹಿಸಿಕೊಳ್ಳುವುದಾಗಿ ರಾಜಣ್ಣ ಹೇಳಿದ್ದು, ಅಂತೆಯೇ ಆಗಿದೆ.