ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಸುದ್ದಿಗರಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.