ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

Date:

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.
ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಹಾಗೂ ವನ್ಯಜೀವಿ ಉಪಟಳದ ಕುರಿತು ಕುಮಾರಸ್ವಾಮಿ ಅವರು ಗಮನ ಸೆಳೆದರು.
ಅರಣ್ಯದ ಅಂಚಿನಲ್ಲಿ ವಾಸಿಸುವ ಹಾಗೂ ಕೃಷಿ ಮಾಡುವ ರೈತರು, ದನಕರುಗಳು ಈ ಸಂಘರ್ಷದಿಂದ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದರೆ, ಇನ್ನೂ ಹಲವರು ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಸಮಸ್ಯೆ ಕರ್ನಾಟಕದಲ್ಲಿ ಗಂಭೀರ ರೂಪ ತಾಳಿದ್ದು, ತಕ್ಷಣ ಶಾಶ್ವತ ಪರಿಹಾರ ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ಸಚಿವ ಭೂಪೇಂದ್ರ ಯಾದವ್ ಅವರನ್ನು ಮನವಿ ಮಾಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಭೂಪೇಂದ್ರ ಯಾದವ್ ಅವರು, ವಿಷಯಕ್ಕೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಸಮಸ್ಯೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಕುಮಾರಸ್ವಾಮಿ ಅವರಿಂದ ಪಡೆದುಕೊಂಡು, ಅಗತ್ಯ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನ ಮುಗಿಯುವೊಳಗೆ ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಅತ್ಯಂತ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...