No menu items!
18.3 C
Munich
Thursday, April 23, 2026

ಕೇಂದ್ರ ಅನುಮತಿ ಸಿಕ್ಕರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

Must read

ಕೇಂದ್ರ ಅನುಮತಿ ಸಿಕ್ಕರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ರಾಜ್ಯ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಜೆ. ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಈಗಾಗಲೇ ಸುಮಾರು 1.50 ಕೋಟಿ ಜನಸಂಖ್ಯೆ ಇದ್ದು, ಜಾಗತಿಕ ಕೈಗಾರಿಕೋದ್ಯಮಿಗಳು ನಗರತ್ತ ಮುಖ ಮಾಡಿದ್ದಾರೆ. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಹೀಗಾಗಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಯೋಜನೆ ಪರವಾಗಿ ತೀರ್ಪು ನೀಡಿದೆ. ಕೇಂದ್ರ ಸರ್ಕಾರದ ಅನುಮತಿಗೆ ಕಾಯುತ್ತಿದ್ದೇವೆ. ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಪಾರದರ್ಶಕ ನೀತಿ ಅನುಸರಿಸಲಾಗುತ್ತಿದೆ. ಭೂಮಿ ಕಳೆದುಕೊಳ್ಳುವ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆ ಅನುಸಾರ ಸಮರ್ಪಕ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಣೆಕಟ್ಟು ಸುರಕ್ಷತಾ ಮಾರ್ಗಸೂಚಿಗಳಲ್ಲಿ ಅಣೆಕಟ್ಟಿನ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧವನ್ನು ಸಡಿಲಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿದರು. ಇದರಿಂದ ಅಣೆಕಟ್ಟು ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅವಕಾಶ ಸಿಗುವುದಲ್ಲದೆ ಸ್ಥಳೀಯ ಆರ್ಥಿಕತೆಯಿಗೂ ನೆರವಾಗಲಿದೆ ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article