ಕೇಂದ್ರ ಬಜೆಟ್ ಜನ ವಿರೋಧಿ, ರೈತ ವಿರೋಧಿ ಬಜೆಟ್ ಆಗಿದೆ ! ಎಂದ ಸಿಎಂ ಹೆಚ್ ಡಿ ಕುಮಾರಸ್ವಾಮಿ ?

Date:

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಮಂಡಿಸಿರುವ ಈ ಬಾರಿಯ ಬಜೆಟ್ ಜನವಿರೋಧಿಯಾಗಿದೆ. ರೈತ ವಿರೋಧಿ ಬಜೆಟ್ ಆಗಿದೆ. ಜನರು, ರೈತರಿಗೆ ನೆರವಾಗುವಂತ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಪೆಟ್ರೋಲ್ ಮೇಲೆ ಸೆಸ್ ಏರಿಕೆ ಮಾಡಲಾಗಿದೆ. ಈ ಮೂಲಕ ವಾಹನ ಸವಾರರು ಬೆಲೆ ಏರಿಕೆಯ ಬಿಸಿಯನ್ನು ಎದುರಿಸಬೇಕಾಗುವಂತಾಗಿದೆ.ಜನಸಾಮಾನ್ಯರಿಗಂತೂ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ. ಉದ್ಯೋಗ, ನೀರಾವರಿಗೂ ಈ ಬಾರಿ ಅವಕಾಶ ನೀಡಿಲ್ಲ ಎಂದು ಕಿಡಿಕಾರಿದರು.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೂ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಕಳೆದ ಬಾರಿಯೂ ಅನ್ಯಾಯವಾಗಿತ್ತು, ಈ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ. ಒಟ್ಟಾರೆಯಾಗಿ ಹೇಳಬೇಕಾದರೇ ನಾವು ಏನು ಮಾಡಿದರೂ ನಡೆಯುತ್ತದೆ ಎನ್ನುವ ಧೋರಣೆ ಕೇಂದ್ರ ಸರ್ಕಾರದ್ದಾಗಿ ಎಂದು ಹರಿಹಾಯ್ದಿದ್ದಾರೆ

 

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...