ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ರೂ.36 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ. 2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.