No menu items!
31.1 C
Munich
Friday, September 4, 2026

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು ದಾಖಲು

Must read

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಹೌದು ಹೆಚ್ಡಿಕೆ, ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಆಪ್ತ ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಸ್ಐಟಿಯಲ್ಲಿರುವ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.
ಲೋಕಾಯುಕ್ತ ವಿಶೇಷ ತನಿಖಾ ದಳ ಎಡಿಜಿಪಿ ಎಂ.ಚಂದ್ರಶೇಖರ್ ಭ್ರಷ್ಟ ಅಧಿಕಾರಿ. ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಕೇಳಿಸಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟೀಕಿಸಿದ್ದರು. ಕೇಂದ್ರ ಸಚಿವರ ಟೀಕೆಗೆ ಎಂ.ಚಂದ್ರಶೇಖರ್ ತಿರುಗೇಟು ನೀಡಿದ್ದರು. ಅಂದಿನಿಂದ ಹೆಚ್ಡಿಕೆ ಮತ್ತು ಚಂದ್ರಶೇಖರ್ ವಿರುದ್ಧ ಫೈಟ್ ನಡೆಯುತ್ತಿದೆ.

- Advertisement -spot_img

More articles

- Advertisement -spot_img

Latest article