ಪ್ರವಾಹ ಪೀಡಿತವಾಗಿರುವ ಜಿಲ್ಲೆಗಳ ಪರಿಸ್ಥಿತಿ, ಮಳೆ ಹಾನಿ ಬಗ್ಗೆ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ ಸಭೆ ನಡೆಸಿದ ಕೇಂದ್ರ ಸರ್ಕಾರ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ಯೋಜನೆಯಡಿ ರಾಜ್ಯ ಸರ್ಕಾರದ ಕೋರಿಕೆಯಂತೆ ಹಣ ನೀಡುವ ಭರವಸೆ ನೀಡಿದೆ.
ಹಾಗೆಯೇ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ . ಜನರಿಗೆ ಆಸರೆಯ ಭರವಸೆಯನ್ನು ನೀಡಿ ಸಾಂತ್ವನ ಹೇಳಿ ಬರುತ್ತಿದ್ದಾರೆ .ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಆ ಮಳೆಗೆ ಹಲವಾರು ಮನೆಗಳು ಮುಳುಗಿಹೋಗಿದೆ .