ಕೇರಳ: ಕೇರಳದಲ್ಲಿ ಮಂಗಳವಾರ ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದು, 25 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.
ಅಗ್ನಿಶಾಮಕ ಮತ್ತು ಪಾರುಗಾಣಿಕಾ, ನಾಗರಿಕ ರಕ್ಷಣೆ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ 250 ಸದಸ್ಯರು ವಯನಾಡ್ನ ಚುರಲ್ಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್ಡಿಆರ್ಎಫ್ನ ಹೆಚ್ಚುವರಿ ತಂಡಕ್ಕೆ ತಕ್ಷಣ ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ವಯನಾಡ್ನಲ್ಲಿ ಭೂಕುಸಿತ: 25ಕ್ಕೂ ಅಧಿಕ ಸಾವು – ಹಲವರು ಸಿಲುಕಿರುವ ಶಂಕೆ
Date: