ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ತುಲಾಭಾರ ಸೇವೆ

Date:

ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಕೇರಳದ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರೀಕೃಷ್ಣ ಕಾಲೇಜಿನ ಮೈದಾನದಲ್ಲಿ 9.50ರ ವೇಳೆಗೆ ಬಂದಿಳಿದರು.ಅಲ್ಲಿಂದ ನೇರವಾಗಿ ಗುರುವಾಯೂರು ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಒದಗಿಸಲಾಗಿತ್ತು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ತುಲಾಭಾರ ಸೇವೆಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

ಗುರುವಾಯೂರು ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆ ಕಾಲ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನಿ ನಂತರ ಕೇರಳ ರಾಜ್ಯ ಬಿಜೆಪಿ ಸಮಿತಿ ಏರ್ಪಡಿಸಿರುವ ಅಭಿನಂದನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....