ಕೋವಿಡ್ ಲಸಿಕೆ ವಿಚಾರವಾಗಿ ಟ್ವೀಟ್ ಮಾಡಿದ ಸುಧಾಕರ್ ಅವರು
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೊನಾ ಲಸಿಕೆಯ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ.

ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದ್ದು, ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಎಂದು ಟ್ವೀಟ್ ಮಾಡಿದ್ದಾರೆ.






