ನಿನ್ನೆ ರಾತ್ರಿ ಸಿಎಂ ಕರೆ ಮಾಡಿದ್ದು, ಆದಷ್ಟು ಬೇಗ ಬೆಂಗಳೂರಿಗೆ ವಾಪಸ್ಸಾಗಿ ಪರಿಸ್ಥಿತಿ ನಿಭಾಯಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಅದನ್ನು ತಡೆಯಬೇಕಿದೆ. ಬೇಗ ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಆತಂಕ ಎದುರಾಗಿದೆ. ಇನ್ನಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ