ಕೊಡಗಿಗೆ ಹೋಗುವ ಮುನ್ನ ಈ ವಿಷಯ ತಪ್ಪದೇ ತಿಳಿಯಿರಿ

Date:

ಗಡಿ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ.

“ಈ ಆದೇಶವು‌ ಆ.30ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದು, ರಾತ್ರಿ ಕರ್ಫ್ಯೂ ಅವಧಿಯಲ್ಲಿ ತುರ್ತು, ಅತ್ಯವಶ್ಯಕ, ವೈದ್ಯಕೀಯ ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಈ ಕೆಳಕಂಡ ತುರ್ತು,ಅತ್ಯವಶ್ಯಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ,” ಎಂದು ಹೇಳಿದ್ದಾರೆ.

ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ಕಾರ್ಪೋರೇಷನ್ ಇತ್ಯಾದಿಗಳು, ತುರ್ತು ಮತ್ತು ಅತ್ಯವಶ್ಯಕ ಸೇವೆಗಳು ಹಾಗೂ ಕೋವಿಡ್- 19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಇಲಾಖೆ, ಕಚೇರಿಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ತುರ್ತು ಸಂದರ್ಭ ಮತ್ತು ಅತ್ಯವಶ್ಯಕ ಸೇವೆಗಳನ್ನು ನೀಡುವ ಎಲ್ಲಾ ಕೈಗಾರಿಕೆ, ಕಂಪೆನಿಗಳು, ಸಂಸ್ಥೆಗಳ ಕಾರ್ಯಾಚರಣೆ ಹಾಗೂ ಅದರ ಸಿಬ್ಬಂದಿಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಆದರೆ ಸಂಬಂಧಪಟ್ಟ ಸಂಸ್ಥೆ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರತಕ್ಕದ್ದಾಗಿದೆ.

“ವೈದ್ಯಕೀಯ ಸೇವೆಯ ಸಂಬಂಧ ರೋಗಿಯೊಂದಿಗೆ ಉಪಚಾರಕರ ಓಡಾಟಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುತ್ತಾ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು, ಪಶು ಆಹಾರ ಮಳಿಗೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಪಡಿತರ ನ್ಯಾಯಬೆಲೆ ಮಳಿಗೆ, ಮದ್ಯ ಮಾರಾಟ ಮಳಿಗೆ ( ಪಾರ್ಸೆಲ್ ರೂಪದಲ್ಲಿ) ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಆದರೆ ಹೋಂ ಡೆಲಿವರಿ ಪದ್ಧತಿಗೆ ಉತ್ತೇಜನ ನೀಡುವಂತೆ,” ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...