ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿತ್ತು ಹಾಸನದವನಾಗಿ ನನಗೆ ಬೇಸರವಿದೆ ಎಂದು ಬಿಜೆಪಿ ಅಭ್ಯರ್ಥಿ ಎ ಮಂಜು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ತಿಂಗಳು ಕಾದು ನೋಡಿ, ನಾನೇ ಸಂಸಸತ್ತಿಗೆ ಹೋಗುತ್ತೇನೆ. ಕಾನೂನು ಹೋರಾಟ ಮುಂದುವರೆಯುತ್ತದೆ. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ, ಸೋಲಿನಿಂದ ಧೃತಿಗೆಟ್ಟಿಲ್ಲ. ನಾನು ಚುನಾವಣೆಯಲ್ಲಿ ಸೋತಿದ್ದಕ್ಕೆ ಬೇಸರವಿಲ್ಲ ಎಂದರು.
ಮೈತ್ರಿ ಲಾಭವಾಗಿದ್ದು ಕುಟುಂಬಕ್ಕೆ ಮಾತ್ರ. ಈಗಲಾದರೂ ನಮ್ಮ ನಾಯಕ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಲಿ. ವಿಶ್ವನಾಥ್ ರಾಜೀನಾಮೆ ಕೊಟ್ಟು ಒಳ್ಳೆ ಕೆಲಸ ಮಾಡಿದ್ದಾರೆ.ಸರ್ಕಾರ ಏನಾಗುತ್ತದೆ ಎಂದು ಕಾದು ನೋಡಬೇಕು ಎಂದರು.