ಕೊನೆಗೂ ವಿಚಾರಣೆಗೆ ಹಾಜರಾದ ನಟ ದರ್ಶನ್..!

By
1 Min Read

ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್ ಪೆಕ್ಟರ್ ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಏನಿದು ಪ್ರಕರಣ?
ಈ ಹಿಂದೆ ದರ್ಶನ್ ವಿರುದ್ಧ ಆರ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

Share This Article