ವಿಜಯಪುರ: NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್ನನ್ನು ಹೊರಗೆ ತೆಗಿದಿದ್ದಾರೆ. ಹೌದು ಸಾವಿರಾರು ಜನರ ಪ್ರಾರ್ಥನೆ ಫಲಿಸಿದ್ದು, 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀವನ್ಮರಣ ಹೋರಾಟ ನಡೆಸುತ್ತಿತ್ತು.
ಮಗುವನ್ನು ಹೊರ ತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ತಂಡ ಬಳಿಕ ಆಂಬುಲೆನ್ಸ್‌ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದೆ. ಸ್ಥಳದಲ್ಲಿ ಜಮಾಯಿಸಿದ್ದ ಸಾವಿರಾರು ಮಂದಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಮಗು ಜೀವಂತವಾಗಿ ಬಂದಿದೆ. ರಕ್ಷಣಾ ಕಾರ್ಯಾಚರಣೆ ಇನ್ನೇನು ಕೊನೆ ಕ್ಷಣಕ್ಕೆ ತಲುಪುತ್ತಿದ್ದಂತೆಯೇ ಮಗು ಅಳುವ ಸದ್ದು ಜೋರಾಗಿ ಕೇಳಿಸುತ್ತಿತ್ತು.
ಕೊನೆಗೂ ಸಾವು ಗೆದ್ದು ಬಂದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್
Date: