ಕೊನೆಗೂ ಸಿದ್ದರಾಮಯ್ಯ ವಿರುದ್ಧ FIR ದಾಖಲು

tnit editors
0 Min Read

ಕೊನೆಗೂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾ ಭೂಮಿ ಹಂಚಿಕೆ ಹಗರಣದಲ್ಲಿ ನ್ಯಾಯಾಲಯ ಸೂಚಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ  ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ  ಇದೀಗ ಸಿದ್ದರಾಮಯ್ಯ ವಿರುದ್ಧ ಸಿಆರ್​ಪಿಸಿ 156(3)ರ ಹಲವು ಸೆಕ್ಷನ್​​ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

Share This Article