ದೆಹಲಿಗೆ ತೆರಳಬೇಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಕ್ಷಣದಲ್ಲಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಕಣ್ಣಿಗೆ ಸೋಂಕು ಉಂಟಾಗಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯನವರು ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆಂದು ತಿಳಿದುಬಂದಿದೆ. ಹಾಗೂ ಸಿದ್ದರಾಮಯ್ಯ ಯಾಕೆ ದೆಹಲಿಗೆ ಹೋಗುತ್ತಿದ್ದಾರೆ ಎಂಬ ಪ್ರಶ್ನೆ ಕೂಡ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು .ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅಧಿಕ ಸ್ಥಾನ ಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ದೊರೆಯಲಿದೆ. ಇಂದು ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ವೇಳೆ ಚರ್ಚೆ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.