ಕೊರಗಜ್ಜನ ಕಟ್ಟೆ ಮೇಲೆ ಕಾಂಡಮ್ ಇಟ್ಟವ ಬಾಯ್ಬಿಟ್ಟ ಸ್ಫೋಟಕ ಸತ್ಯ!

1
39

ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋಪಿ.


ಈತನ ತಂದೆ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದು, ವಿವಿಧ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಗುರುದ್ವಾರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತಾದ ಲೇಖನ ಹಾಕಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ,ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಫು ನಾಗನ ಕಟ್ಟೆ , ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ , ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್, ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು ಮುಂತಾದ ಕಡೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

1 COMMENT

LEAVE A REPLY

Please enter your comment!
Please enter your name here