ಕೊರೊನಾ : ಭಾರತದ ಸಹಾಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ

Date:

ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಪ್ರಭಾವ ಜೋರಾಗಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದಷ್ಟು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಆಕ್ಸಿಜನ್ ಕೊರತೆಯಿಂದ ಕೆಲವೊಂದಿಷ್ಟು ಸೋಂಕಿತರು ಈಗಾಗಲೇ ಸಾವನ್ನಪ್ಪಿದ್ದು ದೇಶದಲ್ಲಿ ಸಾವಿನ ಸಂಖ್ಯೆ ಕೂಡ ಏರುತ್ತಿದೆ. ಭಾರತದ ಈ ಪರಿಸ್ಥಿತಿಗೆ ಕ್ರಿಕೆಟ್ ಜಗತ್ತು ಮರುಗಿದ್ದು ಇತ್ತೀಚೆಗಷ್ಟೆ ಆಸ್ಟ್ರೇಲಿಯಾದ ಕ್ರಿಕೆಟಿಗರಾದ ಪ್ಯಾಟ್ ಕಮಿನ್ಸ್ ಮತ್ತು ಬ್ರೆಟ್ ಲೀ ಕೊರೊನಾ ವಿರುದ್ಧ ಭಾರತದ ಹೋರಾಟಕ್ಕೆ ಆರ್ಥಿಕ ನೆರವು ನೀಡಿದ್ದರು.

 

ಪ್ಯಾಟ್ ಕಮಿನ್ಸ್ 50,000 ಡಾಲರ್ ಮತ್ತು ಬ್ರೆಟ್ ಲೀ ಒಂದು ಬಿಟ್ ಕಾಯಿನ್ ದೇಣಿಗೆಯನ್ನು ಭಾರತಕ್ಕೆ ನೀಡುವುದರ ಮೂಲಕ ಕೊರೊನಾ ವಿರುದ್ಧದ ದೇಶದ ಹೋರಾಟಕ್ಕೆ ಆರ್ಥಿಕ ಬೆಂಬಲ ಸೂಚಿಸಿದ್ದರು. ಪ್ಯಾಟ್ ಕಮಿನ್ಸ್ ಮತ್ತು ಬ್ರೆಟ್ ಲೀ ಅವರ ಈ ಹೆಜ್ಜೆಗೆ ದೊಡ್ಡ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿತ್ತು. ಆಸ್ಟ್ರೇಲಿಯಾ ಕ್ರಿಕೆಟಿಗರಾದ ಪ್ಯಾಟ್ ಕಮಿನ್ಸ್ ಮತ್ತು ಬ್ರೆಟ್ ಲೀ ನಂತರ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಕೂಡ ಭಾರತದ ಕೊರೊನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ಬೆಂಬಲವನ್ನು ಸೂಚಿಸಿದೆ.

 

 

ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಯೂನಿಸೆಫ್ ಆಸ್ಟ್ರೇಲಿಯಾ ಜೊತೆಗೂಡಿ 50,000 ಡಾಲರ್‌ಗಳನ್ನು ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ದೇಣಿಗೆಯಾಗಿ ನೀಡಲು ಮುಂದಾಗಿವೆ. ‘ಭಾರತೀಯರು ಮತ್ತು ಆಸ್ಟ್ರೇಲಿಯನ್ನರು ವಿಶೇಷವಾದ ಬಾಂಧವ್ಯವನ್ನು ಹೊಂದಿದ್ದಾರೆ, ಎರಡೂ ದೇಶಗಳ ಕ್ರಿಕೆಟ್ ಮೇಲಿನ ಪ್ರೀತಿ ಉತ್ತಮ ಸ್ನೇಹ ಸಂಬಂಧವನ್ನು ಸೃಷ್ಟಿ ಮಾಡಿದೆ. ಭಾರತದಲ್ಲಿನ ಕೆಲ ಸಹೋದರ ಮತ್ತು ಸಹೋದರಿಯರು ಕೊವಿಡ್ ಎರಡನೇ ಅಲೆಯಿಂದ ಬಳಲುತ್ತಿದ್ದು,ಅಂಥವರಿಗೆ ನಮ್ಮ ಮನ ಮಿಡಿದಿದ್ದು ಆರ್ಥಿಕ ನೆರವು ನೀಡಲು ಮುಂದಾಗಿದ್ದೇವೆ’ ಎಂದು ಆಸ್ಟ್ರೇಲಿಯಾ ಕ್ರಿಕೆಟ್‌ನ ಮುಖ್ಯ ಕಾರ್ಯನಿರ್ವಾಹಕ ನಿಕ್ ಹಾಕ್ಲಿ ತಿಳಿಸಿದರು.

 

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...