ಕೊರೊನಾ ಹೆಚ್ಚಳ; ಈ 2 ರಾಜ್ಯಗಳಿಗೆ ಕೇಂದ್ರದ ಸೂಚನೆ

1
45

ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ ಮೇಲೆ ಕಣ್ಣಿಡುವ ಮೂಲಕ ಕೊರೊನಾ ಹರಡುವಿಕೆ ತಡೆಯ ಪ್ರಯತ್ನಗಳನ್ನು ತೀವ್ರಗೊಳಿಸಬೇಕು ಎಂದು ಈ ಎರಡೂ ರಾಜ್ಯಗಳಿಗೆ ಸೂಚಿಸಿದೆ.

ಸೋಂಕು ಹೆಚ್ಚಿರುವ ಭೌಗೋಳಿಕ ಪ್ರದೇಶಗಳಲ್ಲಿ ಸಮರ್ಪಕ ಕ್ರಮಗಳನ್ನು ತೆಗದುಕೊಳ್ಳುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ತಿಳಿಸಿದರು.

ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳು ಅಗತ್ಯ ಎಂದಿರುವ ಭಲ್ಲಾ, ಹೆಚ್ಚು ಕೊರೊನಾ ಪ್ರಕರಣಗಳಿರುವ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಕುರಿತು ರಾಜ್ಯ ಸರ್ಕಾರಗಳು ಆಲೋಚಿಸಬೇಕು ಎಂದು ಸಲಹೆ ನೀಡಿದರು.

ಅಗತ್ಯವಿದ್ದಲ್ಲಿ ಹೆಚ್ಚಿನ ಕೊರೊನಾ ಲಸಿಕೆಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರಗಳಿಗೆ ಹೇಳಿದ್ದು, ರಾಜ್ಯ ಸರ್ಕಾರಗಳು ಲಸಿಕಾ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಲಸಿಕೆ ನೀಡುವ ಜೊತೆಗೆ ಜನರಿಗೆ ಕೊರೊನಾ ಸೂಕ್ತ ನಡವಳಿಕೆಗೆ ಪ್ರೋತ್ಸಾಹ ನೀಡಬೇಕು ಹಾಗೂ ಮುಂಬರುವ ಹಬ್ಬಗಳ ಸಮಯದಲ್ಲಿ ಸಾಮೂಹಿಕವಾಗಿ ಜನರು ಸೇರುವುದನ್ನು ತಪ್ಪಿಸಬೇಕು ಎಂಬುದನ್ನು ಒತ್ತಿಹೇಳಿದರು. ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಖ್ಯ ಕಾರ್ಯದರ್ಶಿಗಳು, ಕೇರಳ ಹಾಗೂ ಮಹಾರಾಷ್ಟ್ರದ ಡಿಜಿಪಿಗಳು ಸಭೆಯಲ್ಲಿ ಭಾಗವಹಿಸಿದ್ದರು.

1 COMMENT

LEAVE A REPLY

Please enter your comment!
Please enter your name here