ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

Date:

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

ಸದ್ಯ ಇಡೀ ವಿಶ್ವ ಹೆಮ್ಮಾರಿ ಕೊರೋನಾ ಹಾವಳಿಯಿಂದ ತತ್ತರಿಸಿದೆ . ಎಲ್ಲಾ ಕ್ಷೇತ್ರಕ್ಕೂ ಕೊರೋನಾ ಮಹಾಮಾರಿಯ ಕಾಟ ಕಾಡಿದೆ . ಮಾರ್ಚ್ 29 ರಿಂದ ಆರಂಭವಾಗಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಸದ್ಯಕ್ಕೆ ನಿಂತಿದೆ . ಈ ನಡುವೆ ಬಿ ಸಿ ಸಿ ಐ I PL ಆಯೋಜನೆ ಬಗ್ಗೆ ಚಿಂತನೆ ನಡೆಸುತ್ತಿದೆ ‌.

ಹೌದು , ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ . ಏಪ್ರಿಲ್ 15ರ ವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ ‌ ‌ . ಇದು ವಿಸ್ತರಣೆಯಾದರೂ ಅಚ್ಚರಿ ಇಲ್ಲ.
ಮುಂದುವರಿಯುವ ಸಾಧ್ಯತೆ ಖಂಡಿತಾ ಹೆಚ್ಚಿದೆ . ಆದ್ದರಿಂದ ಇಡೀ ದೇಶಕ್ಕೆ ದೇಶವೇ ಸಂಪೂರ್ಣ ನಿಶಬ್ಧವಾಗಿದೆ . ಈ ಮಧ್ಯೆ ಬಿ ಸಿ ಸಿ ಐ ಅಧಿಕಾರಿಗಳು ಐ ಪಿ ಎಲ್ ನಡೆಸುವ ಬಗ್ಗೆ ಗಮನಹರಿಸಿದ್ದಾರೆ .

ಮಾರ್ಚ್ 29 ರಿಂದ ಆರಂಭವಾಗಬೇಕಿದ್ದ I P L ಸದ್ಯ ಕೊರೋನಾ ವೈರಸ್ ಅಟ್ಟಹಾಸದಿಂದ ಮುಂದೂಡಲ್ಪಟ್ಟಿದೆ . ಅದು ನಡೆಯುವುದು ಅನುಮಾನ . ಪರಿಸ್ಥಿತಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತಿದೆ . ಆದರೆ ಬಿ ಸಿ ಸಿ ಐ ಈ I P L ಆಯೋಜನೆ ಬಗ್ಗೆ ತೆರೆ ಮರೆಯಲ್ಲಿ ಚಿಂತನೆ ನಡೆಸಿದೆ .‌ ಈ ಬಗ್ಗೆ ಬಿ ಸಿ ಸಿ ಐ ಅಧಿಕಾರಿಗಳಿಂದ ಮಾಹಿತಿ‌ ಬಂದಿರುವುದಾಗಿ ವರದಿಯಾಗಿದೆ .

ಐಪಿಎಲ್‌ 13ನೇ ಆವೃತ್ತಿ ಈ ವರ್ಷ ನಡೆಸಲು ಸಾಧ್ಯವಾಗದೇ ಇದ್ದರೆ ಬಿಸಿಸಿಐ ಮತ್ತು ಟೂರ್ನಿಯ ಅಧಿಕೃತ ಪ್ರಸಾರ ಹಕ್ಕು ಪಡೆದಿರುವ ಸ್ಟಾರ್‌ ವಾಹಿನಿಗೆ ಭಾರೀ ಸಂಕಷ್ಟ ಎದುರಾಗಲಿದೆ . ಸಹಸ್ರಾರು ಕೋಟಿ ರೂಪಾಯಿಗಳ ಭಾರಿ ನಷ್ಟವನ್ನು ಅದು ಅನುಭವಿಸಲಿದೆ ಹೀಗಾಗಿ ತನ್ನ ಮುಂದಿರುವ ಸಣ್ಣ ಅವಕಾಶವನ್ನು ಬಳಸಿಕೊಳ್ಳಲು ಅವಕಾಶಕ್ಕಾಗಿ ಬಿಸಿಸಿಐ ನೋಡುತ್ತಿದೆ ‌.

ಈ ನಿಟ್ಟಿನಲ್ಲಿ ತೆರೆಮರೆಯಲ್ಲೇ ಇದರ ಪ್ರಯತ್ನಗಳು ಮುಂದುವರಿದಿವೆ.

“ಐಪಿಎಲ್‌ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಪರ್ಯಾಯ ದಿನಾಂಕವನ್ನು ಹುಡುಕುತ್ತಿದೆ. ಜುಲೈನಲ್ಲಿ ಮುಚ್ಚಿದ ಕ್ರೀಡಾಂಗಣದಲ್ಲಿ ಆಡಿಸುವ ಕುರಿತಾಗಿಯೂ ಆಲೋಚಿಸಲಾಗಿದೆ. ಜೊತೆಗೆ ವರ್ಷಾಂತ್ಯದಲ್ಲಿ ನಡೆಸುವ ಕಡೆಗೂ ಚಿಂತನೆ ನಡೆಸಲಾಗುತ್ತಿದೆ . I P L ಆಡಿಸುವ ವಿಶ್ವಾಸವನ್ನು ಬಿ ಸಿ ಸಿ ಐ ಹೊಂದಿದೆ ಎನ್ನಲಾಗಿದೆ .

ಇನ್ನು ಈ ಬಾರಿಯ ಐಪಿಎಲ್ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಮ್ ಬ್ಯಾಕ್ ಟೂರ್ನಿ ಎಂದೇ ಹೇಳಲಾಗಿತ್ತು . 2019 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಬಳಿಕ ಧೋನಿ ಭಾರತದ ಪರ ಕಣಕ್ಕಿಳಿದಿಲ್ಲ ‌ . ಹೀಗಾಗಿ I P L ನಲ್ಲಿ ಧೋನಿ ಜಬರ್ದಸ್ತ್ ಪರ್ಫಾರ್ಮೆನ್ಸ್ ನೀಡಿ ಭಾರತದ ಪರ ಕಣಕ್ಕಿಳಿಯುತ್ತಾರೆ ಎಂಬ ವಿಶ್ವಾಸದಲ್ಲಿ ಅಭಿಮಾನಿಗಳಿದ್ದಾರೆ .

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ ..!

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...