ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಟಫ್ ರೂಲ್ಸ್?

Date:

ಬೆಂಗಳೂರು: ವೀಕೆಂಡ್ ಕರ್ಫ್ಯೂ ಬೆನ್ನಲ್ಲೇ ರಾಜ್ಯದ ಜನರಿಗೆ ಸರ್ಕಾರ ಶಾಕ್ ಕೊಡಲು ಮುಂದಾದಂತೆ ಕಾಣುತ್ತಿದೆ. ಇಡೀ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮಾದರಿ ಟಫ್ ರೂಲ್ಸ್ ಜಾರಿ ಆಗುವ ಸಂಭವ ಇದೆ. ಸೋಮವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದೂ, ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.

ಈಗಿರುವ ವೀಕೆಂಡ್ ಕರ್ಫ್ಯೂ ಜೊತೆಗೆ ಗುರುವಾರ, ಶುಕ್ರವಾರಕ್ಕೆ ಅನ್ವಯ ಆಗುವಂತೆ ಇನ್ನಷ್ಟು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧಾರ ಹೊರಬೀಳುವ ಸಂಭವ ಇದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ವೀಕೆಂಡ್ ಕರ್ಫ್ಯೂವನ್ನು ವಾರವಿಡಿ ಮುಂದುವರೆಸಿದ್ರೆ ಒಳ್ಳೆಯದು ಎಂಬ ಅಭಿಪ್ರಾಯವಿದೆ. ಆದರೆ ಜನ ಕೇಳುತ್ತಿಲ್ಲ ಎಂದರು.

ಈಗಿರುವ ಕ್ರಮಗಳ ಜೊತೆಗೆ ಇನ್ನಷ್ಟು ಬಿಗಿ ಕ್ರಮಕೈಗೊಳ್ಳುವ ಬಗ್ಗೆ ಸೋಮವಾರದ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಆಗುತ್ತೆ ಅಂತಾ ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ರು. ಇದೇ ವೇಳೆ, ರಾಜ್ಯದಲ್ಲಿ ಉಚಿತ ವ್ಯಾಕ್ಸಿನ್ ಕೊಡುವ ಬಗ್ಗೆಯೂ ಸರ್ಕಾರ ತೀರ್ಮಾನಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

 

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...