ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಆದರೆ ಅದು ಜಿನೋಮೊ ಸಿಕ್ವೆನ್ಸಿಂಗ್ ನಲ್ಲೇ ನಮಗೆ ಸ್ಪಷ್ಟವಾಗಿ ಗೊತ್ತಾಗೊದು. ಹೀಗಾಗಿ ಜಿನೋಮೊ ಸಿಕ್ವೆನ್ಸಿಂಗ್ ಗೆ ಕಳಿಸಿದ್ವಿ. ಇದೀಗ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು.
ಆದರೆ ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ಬಲ್ಪ ಎಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.