ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಕರ್ನಾಟಕದ ಒಟ್ಟು 243 ಕೇಂದ್ರಗಳಲ್ಲಿ ಇದಕ್ಕೆ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಿದ್ದು ಇದರೊಂದಿಗೆ ರಾಜ್ಯಾದ್ಯಂತ ಲಸಿಕೆ ವಿತರಣೆ ಕಾರ್ಯ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಎರಡನೇ ಹಂತದಲ್ಲಿ ಪೊಲೀಸರು, ಕಂದಾಯ ಇಲಾಖೆ ನೌಕರರು ಮತ್ತು ಇತರೆ ವಾರಿಯರ್ ಗಳಿಗೆ ಲಸಿಕೆ ನೀಡಲಾಗುತ್ತದೆ. ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ತೀವ್ರತರವಾದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗು ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ಇದರೊಂದಿಗೆ ರಾಜ್ಯಾದ್ಯಂತ ಲಸಿಕೆ ವಿತರಣೆ ಕಾರ್ಯ ಅಧಿಕೃತವಾಗಿ ಚಾಲನೆ ಪಡೆದುಕೊಂಡಿತು.