ಕೊಲೆ ಪ್ರಕರಣ: ಕೆಲಸ ಕಳೆದುಕೊಂಡ ಸುಶೀಲ್ ಕುಮಾರ್

Date:

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು. ದಿನದಿಂದ ದಿನಕ್ಕೆ ಜಾಗ ಬದಲಾಯಿಸುತ್ತಾ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿರುವುದಕ್ಕೆ ದೆಹಲಿ ಪೊಲೀಸರ ಬಳಿ ಸಾಕ್ಷ್ಯಗಳಿವೆ ಎನ್ನಲಾಗುತ್ತಿದ್ದು ಇತ್ತೀಚೆಗಷ್ಟೇ ಕೊಲೆ ನಡೆದ ಸ್ಥಳಕ್ಕೆ ಸುಶೀಲ್ ಕುಮಾರ್‌‌ನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದರು. ಇದಾದ ಬೆನ್ನಲ್ಲೇ ಇದೀಗ ಸುಶೀಲ್ ಕುಮಾರ್ ಪಾಲಿಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದ್ದು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತಾಗಿದ್ದಾರೆ.

ಹೌದು ಸುಶೀಲ್ ಕುಮಾರ್‌‌ ವಿರುದ್ಧ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣದಿಂದಾಗಿ ಅವರನ್ನು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತುಗೊಳಿಸಿರುವುದಾಗಿ ಉತ್ತರ ರೈಲ್ವೆಯ ಸಿಪಿಆರ್‌ಒ ದೀಪಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...