ಕೊಳ್ಳೇಗಾಲದ ಯುವತಿ ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್

Date:

ಚಾಮರಾಜನಗರ: ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್‌ ಇಂಜಿನಿಯರ್ ಆಗಿ ಕೊಳ್ಳೇಗಾಲದ ಆಶ್ರಿತಾ ಒಲೆಟಿ ಎಂಬವರು ಸಾಧನೆ ತೋರಿದ್ದಾರೆ.

ಈ ಸಂಬಂಧ ನಿವೃತ್ತ ಸೈನಿಕ ಗಂಗಾಧರ್ ಈಟಿವಿ ಭಾರತದೊಂದಿಗೆ ಮಾತನಾಡಿದ್ದು, ಆಶ್ರಿತಾ ವಿ ಒಲೆಟಿ ಅವರು ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.

1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀಧರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದು ಕ್ವಾಡ್ರಲ್ ಲೀಡರ್ ಆಗಿದ್ದಾರೆ ಎಂದು ತಿಳಿಸಿದರು.

ಫ್ಲೈಟ್ ಟೆಸ್ಟ್ ಇಂಜಿನಿಯರ್​ಗಳು ಹೊಸ ವಿಮಾನಗಳ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಲಿದ್ದು, ವಿಮಾನಗಳ ಸೇವೆಗೆ ಮುಕ್ತ ಮಾಡಲು ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪದವಿ ಪ್ರಧಾನ ಸಮಾರಂಭ ಮುಗಿದಿದ್ದು, ವಾಯುಸೇನೆ ಅಧಿಕೃತವಾಗಿ ಮೊದಲ ಮಹಿಳಾ ಫ್ಲೈಟ್ ಟೆಸ್ಟ್‌ ಇಂಜಿನಿಯರ್ ಆಗಿರುವ ಕುರಿತು ಮಾಹಿತಿ ಹಂಚಿಕೊಂಡಿಲ್ಲ.

 

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...