ಕೊವಿಡ್ ಭೀತಿ; ಈ 5 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

Date:

  1. ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ 19 ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಐದು ಜಿಲ್ಲೆಗಳ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, “ಒಂದು ತಿಂಗಳಿಂದ ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದು ಕಡಿಮೆಯಾಗಿದೆ. ಜೊತೆಗೆ ನಾವು ಲಸಿಕೆ ಅಭಿಯಾನಕ್ಕೂ ಒತ್ತು ಕೊಟ್ಟಿದ್ದೇವೆ. ಲಸಿಕೆ ಹಾಕುವುದನ್ನು ಈಗಿರುವುದಕ್ಕಿಂತ ಹೆಚ್ಚು ಮಾಡಲು ಸೂಚಿಸಿದ್ದೇನೆ. ಈ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕುರಿತು ಚರ್ಚೆ ಮಾಡಿಲ್ಲ. ನಾಳೆ ಆ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದಿದ್ದಾರೆ.

 

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದ್ದಾರೆ.

 

ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಸೂಚಿಸಿದ್ದಾರೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಕಟ್ಟುನಿಟ್ಟಾಗಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...