ಪ್ರಸ್ತುತ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಏಪ್ರಿಲ್ 9ರಂದು ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಬಯೋ ಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದಿದ್ದು ಉಳಿದ 31 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಇತ್ತೀಚೆಗಷ್ಟೇ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಯುಎಇಯಲ್ಲಿ ಸೆಪ್ಟೆಂಬರ್ 19ರಿಂದ ಮುನ್ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇದಕ್ಕೂ ಮುನ್ನ ಟೀಮ್ ಇಂಡಿಯಾ ತಂಡ ಜೂನ್ 18-22ರವರೆಗೆ ನ್ಯೂಜಿಲೆಂಡ್ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಆಡಲಿದೆ ಹಾಗೂ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಪಂದ್ಯಗಳನ್ನಾಡಲು ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ಮೇಲೆ ಯುಎಇಯಲ್ಲಿ ಐಪಿಎಲ್ ನಡೆಸುವುದು ಸೌರವ್ ಗಂಗೂಲಿ ಯೋಜನೆಯಾಗಿದೆ. ಹೀಗಾಗಿ ಸೌರವ್ ಗಂಗೂಲಿ ಯುಎಇ ತಲುಪಿದ್ದು ಐಪಿಎಲ್ ಮುಂದುವರೆಸಲು ಪಣ ತೊಟ್ಟಿದ್ದಾರೆ.