ಕೋಟಿಗೊಬ್ಬ-3 ಅಖಾಡಕ್ಕೆ ಇಳಿದ ‘ಪೈಲ್ವಾನ್’ ಸುದೀಪ್..!

Date:

ಸ್ಯಾಂಡಲ್​ವುಡ್​ನ ಬಾದ್​ ಷಾ, ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಒಂದರ ಮೇಲೊಂದರಂತೆ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸುದೀಪ್ ಅಂದರೆ ಸದಾ ಆ್ಯಕ್ಟಿವ್ ಆಗಿರೋ ಆ್ಯಕ್ಟರ್, ಡೈರೆಕ್ಟರ್. ಕನ್ನಡ ಮಾತ್ರವಲ್ಲದೆ ಬಾಲಿವುಡ್​ , ಟಾಲಿವುಡ್.. ಅಷ್ಟೇ ಏಕೆ ಹಾಲಿವುಡ್​​​ನಲ್ಲೂ ಸುದೀಪ್ ಹವಾ ಇದೆ.
ಸುದೀಪ್ ಸಿನಿಮಾಗಳ ಜೊತೆಗೆ ಕಿರುತೆರೆ ಮತ್ತು ಕ್ರಿಕೆಟ್​ನಲ್ಲೂ ಬ್ಯುಸಿ ಇದ್ದಾರೆ. ಸದಾ ಕ್ರಿಯಾಶೀಲರಾಗಿರುವ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾ ಆಗಸ್ಟ್​​​​ನಲ್ಲಿ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲೂ ಈ ಸಿನಿಮಾ ರಿಲೀಸ್ ಆಗುತ್ತಿದೆ.


ಪೈಲ್ವಾನ್ ರಿಲೀಸ್​ ಆಗುತ್ತಿರುವ ಖುಷಿಯಲ್ಲಿ ಕಿಚ್ಚನ ಅಭಿಮಾನಿಗಳಿದ್ದಾರೆ. ಈ ನಡುವೆ ಕಿಚ್ಚನಿಂದ ಮತ್ತೊಂದು ಸರ್​ಪ್ರೈಸ್ ಸಿಕ್ಕಿದೆ. ಸುದೀಪ್ ಈಗ ಕೋಟಿಗೊಬ್ಬ-3 ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಹೈದರಾಬಾದ್​ನಲ್ಲಿ ಶೂಟಿಂಗ್ ನಡೆಯುತ್ತಿದ್ದು, ರಾಮೂಜಿ ಫಿಲ್ಮ್​ ಸಿಟಿಯಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೆಟ್​ ನಿರ್ಮಾಣ ಮಾಡಲಾಗಿದೆ.
ಶಿವ ಕಾರ್ತಿಕ್ ಅವರ ಚೊಚ್ಚಲ ಸಿನಿಮಾ ಇದಾಗಿದೆ. ಮಡೋನಾ ಸೆಬಾಸ್ಟಿಯನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್​ ನಟ ಅಫ್ತಾಬ್​ ಶಿವದಾಸನಿ ಶ್ರದ್ಧಾ ದಾಸ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯಕ್ಕೆ 15 ದಿನಗಳ ಚಿತ್ರೀಕರಣ ನಿಗದಿ ಮಾಡಲಾಗಿದೆ. ಹೈದರಾಬಾದ್ ಬಳಿಕ ಬೆಂಗಳೂರು ಮತ್ತು ಮೈಸೂರಲ್ಲಿ ಶೂಟಿಂಗ್ ನಡೆಯುತ್ತದೆ.
ಈ ಸಿನಿಮಾ ಶಿವ ಕಾರ್ತಿಕ್ ನ ಮೊದಲ ಸಿನಿಮಾ ಆಗಿದ್ದು, ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿರುವ ಮಡೋನಾ ಸೆಬಾಸ್ಟಿಯನ್, ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಶ್ರದ್ಧಾ ದಾಸ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕೋಟಿಗೊಬ್ಬ -2ಗೆ ಬಂಡವಾಳ ಹಾಕಿದ್ದ ಸೂರಪ್ಪ ಬಾಬು ಈ ಸಿನಿಮಾಕ್ಕೂ ಬಂಡವಾಳ ಹಾಕಿದ್ದಾರೆ. ಸುದೀಪ್ ಈ ಸಿನಿಮಾಕ್ಕೆ ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...