ಕೋಮು ದ್ವೇಷ ಭಾಷಣ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು
ಮಂಗಳೂರು: ಅನ್ಯ ಧರ್ಮಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಅನ್ವಯ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು.
ಈ ಸಂಬಂಧ ಇದೀಗ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.