ಮೊನ್ನೇಯಷ್ಟೇ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ಹೌದು ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.