No menu items!
3.1 C
Munich
Thursday, April 30, 2026

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಉತ್ತಮ ಅವಕಾಶವಿದೆ !

Must read

ಬೆಂಗಳೂರು: ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಡಾ ಎಂಸಿ ಸುಧಾಕರ್ ಮತ್ತು ಬೇರೆ ನಾಯಕರ ಬಗ್ಗೆ ತಾನು ಕಾಮೆಂಟ್ ಮಾಡಲ್ಲ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಡಾ ಎಂಸಿ ಸುಧಾಕರ್ ಮತ್ತು ಬೇರೆ ನಾಯಕರ ಬಗ್ಗೆ ತಾನು ಕಾಮೆಂಟ್ ಮಾಡಲ್ಲ, ಆದರೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಉತ್ತಮ ಅವಕಾಶವಿದೆ, ಕೋಲಾರ ಯಾವತ್ತಿಗೂ ಕಾಂಗ್ರೆಸ್ ಭದ್ರಕೋಟೆಯಾಗಿದೆ ಮತ್ತು ತಾನು 7 ಬಾರಿ ಸಂಸತ್ತಿಗೆ ಆಯ್ಕೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಕೇವಲ ಜಾಫರ್ ಶರೀಫ್ ಮತ್ತು ಬಿ ಶಂಕರಾನಂದ ಮಾತ್ರ ತನ್ನಂತೆ ಏಳು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಮುನಿಯಪ್ಪ ಹೇಳಿದರು.
ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕೆಂದು ತಾನು ಕೇಳಿಲ್ಲ, ಆ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು, ಇವತ್ತು ಬೆಳಗ್ಗೆ ಸಹ ತಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತಾಡಿದ್ದಾಗಿ ಸಚಿವ ಹೇಳಿದರು. ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಎರಡು ಎಡ ಮತ್ತು ಎರಡು ಬಲ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ನಡೆದುಕೊಂಡು ಬಂದಿರುವ ವಾಡಿಕೆಯಾಗಿದೆ, ಅದೆನೇ ಇದ್ದರೂ ತಾನು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಮುನಿಯಪ್ಪ ಹೇಳಿದರು.

- Advertisement -spot_img

More articles

- Advertisement -spot_img

Latest article