ಕೋಲ್ಕತ್ತಾ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ರೋಪಿ ಸಂಜಯ್’ಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಕೋಲ್ಕತ್ತಾ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ರೋಪಿ ಸಂಜಯ್’ಗೆ ಜೀವಾವಧಿ ಶಿಕ್ಷೆ ಪ್ರಕಟ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ತಪ್ಪಿತಸ್ಥನಾಗಿರುವ ಸಂಜಯ್ ರಾಯ್ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ.
ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ಗಳ ಅಡಿಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿದೆ. ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದರು. ಈ ವೇಳೆ ಕೋರ್ಟ್, ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ.
ಹಣವನ್ನು ಹೇಗೆ ಬೇಕಾದ್ರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿತು. ಇನ್ನೂ ನ್ಯಾಯಾಧೀಶರು ಶನಿವಾರ ತೀರ್ಪು ಪ್ರಕಟಿಸುತ್ತಿದ್ದಂತೆ ದೋಷಿಯಾಗಿರುವ ಸಂಜಯ್ ರಾವ್ ನಾನು ಅಮಾಯಕ. ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿ ತನ್ನ ಮೇಲಿದ್ದ ಆರೋಪಗಳನ್ನು ನಿರಾಕರಿಸಿದ್ದ.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...