ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ನಿಯಂತ್ರಣದ ಕುರಿತಂತೆ ಸಚಿವರು, ಬೆಂಗಳೂರು ಶಾಸಕರು ಹಾಗೂ ಸಂಸದರುಗಳೊಂದಿಗೆ ಸಭೆ ನಡೆಯುತ್ತಿದೆ. ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಸಚಿವರು, ಸಂಸದರು ಸೇರಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಸಭೆಯಲ್ಲಿ ಆಕ್ಸಿಜನ್, ಬೆಡ್, ಪ್ರಕರಣಗಳ ಬಗ್ಗೆ ಮಾಹಿತಿ ಹಂಚಿಕೊಂಡ ಡಾ.ಸುಧಾಕರ್ ಜಿಮ್, ಮಾಲ್, ಥಿಯೇಟರ್ ಬಂದ್ ಸಾಧ್ಯತೆ, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಿತ ಪ್ರವೇಶ ಅವಕಾಶ, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್ ಅವಕಾಶದ ನೀಡುವ ಬಗ್ಗೆ ಚರ್ಚೆ ಜಾರಿಯಲ್ಲಿದೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ದೇಶದ ಎಲ್ಲಾ ವಿಧಾನಸಭೆ ಅಧ್ಯಕ್ಷರು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯ ವಿಧಾನಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.