ಕೋವಿಡ್ ಮಾರ್ಗಸೂಚಿಯಲ್ಲಿ ಮತ್ತೆ ಬದಲಾವಣೆ!

Date:

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆವರೆಗೆ ಕೊರೊನಾ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಮತ್ತು ಒಂದಿಷ್ಟು ಬೇರೆ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿ ಏಪ್ರಿಲ್‌ 26ರಂದು ಸರಕಾರ ಮಾರ್ಗಸೂಚಿ ಹೊರಡಿಸಿತ್ತು. ಈ ಮಾರ್ಗಸೂಚಿಯಲ್ಲಿ ಮಂಗಳವಾರ ಸರಕಾರ ಅಲ್ಪ ಬದಲಾವಣೆ ಮಾಡಿತ್ತು. ಇದೀಗ ಬುಧವಾರ ಮತ್ತಷ್ಟು ಬದಲಾವಣೆ ಮಾಡಲಾಗಿದೆ.

ಈ ಹಿಂದಿನ ಮಾರ್ಗಸೂಚಿಯಲ್ಲಿ ಕೊರೊನಾ ಸುರಕ್ಷಿತ ಕ್ರಮಗಳೊಂದಿಗೆ ಕಾರ್ಯ ನಿರ್ವಹಣೆ ಮಾಡಲು, ಉತ್ಪಾದನಾ ಘಟಕಗಳು, ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ಇದರಲ್ಲಿ ಗಾರ್ಮೆಂಟ್ಸ್‌ ಘಟಕಗಳಿಗೆ ಮಾತ್ರ ಅನುಮತಿ ನೀಡಿರಲಿಲ್ಲ.

ಇದೀಗ ಮಾರ್ಗಸೂಚಿಗೆ ತಿದ್ದುಪಡಿ ತಂದಿರುವ ಸರಕಾರ, ಶೇ.50ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್‌ ಘಟಕಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ ಕೊರೊನಾ ಸುರಕ್ಷಿತ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.

ಮಂಗಳವಾರವಷ್ಟೆ ಎಪಿಎಂಸಿಗಳನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ತೆರಯಲು ಸರಕಾರ ಅನುಮತಿ ನೀಡಿತ್ತು. ಜತೆಗೆ ಅಗತ್ಯ ವ ವಸ್ತುಗಳ ಅಂಗಡಿ ಮುಂಗಟ್ಟುಗಳೊಂದಿಗೆ ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಗಳನ್ನೂ ತೆರೆಯಲು ಅವಕಾಶ ಕಲ್ಪಿಸಿತ್ತು.

 

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...