ಕೋವಿಡ್ 2 ನೇ ಅಲೆ ಮುಗಿದರೂ ಕಾಂಗ್ರೆಸ್ ಗೆ ಅಧ್ಯಕ್ಷ ಸಿಗ್ಲಿಲ್ಲ : ತೇಜಸ್ವಿ ಸೂರ್ಯ

Date:

ಕೋವಿಡ್ ಎರಡನೇ ಅಲೆ ಮುಗಿದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ! ಎಂದು ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟರು. ಕೊರೊನಾ ಎರಡು ಅಲೆಗಳು ಬಂದು ಹೋಗಿವೆ. ಮೂರನೇ ಅಲೆ ಬರುವಂತಿದೆ. ಆದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ ಎಂದರು.


ಇನ್ನು ರಾಜ್ಯದ ಯುವ ಕಾಂಗ್ರೆಸ್‍ನಲ್ಲೂ ಸಮಸ್ಯೆ ಮುಂದುವರಿದಿದೆ. ಗೆದ್ದವರು ಒಬ್ಬರು, ಇನ್ನೊಬ್ಬರಿಗೆ ಅಧ್ಯಕ್ಷತೆ, ಅದರಲ್ಲೂ ಗುಂಪುಗಾರಿಕೆ ಹಾಗೂ ಹೊಡೆದಾಟ ಮುಂದುವರಿದಿದೆ ಎಂದು ವಿವರಿಸಿದರು. ಯುವ ಮೋರ್ಚಾವು ನಿರಂತರವಾಗಿ ಅನೇಕ ನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನು ಸ್ಫೂರ್ತಿಯ ವಿಷಯವನ್ನಾಗಿ ಯುವ ಮೋರ್ಚಾದ ಪದಾಧಿಕಾರಿಗಳು ಮಾಡಿಕೊಂಡು ಬೆಳೆಯಬೇಕು ಎಂದು ಆಶಿಸಿದರು.


ಯುವ ಮೋರ್ಚಾವು ಮಾದರಿ ಸಂಘಟನೆ. ಅದು ಎಲ್ಲ ರೀತಿಯ ಯುವಕರನ್ನು ಪ್ರತಿನಿಧಿಸುವ ಸಂಘಟನೆಯಾಗಿ ಬೆಳೆಯಬೇಕು. ಯುವ ಮೋರ್ಚಾವು ರಾಜಕೀಯದಲ್ಲಿ ಹೊಸ ಪ್ರಯತ್ನ ಅಳವಡಿಸಿಕೊಳ್ಳುವಂತಾಗಬೇಕು. ಮೂಲ ತತ್ವ, ಸಿದ್ಧಾಂತಗಳಲ್ಲಿ ಸ್ಥಿರತೆ ಮತ್ತು ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಬದಲಾವಣೆ ನಮ್ಮದಾಗಿರಬೇಕು ಎಂದು ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...