ಕೌಟುಂಬಿಕ ಕಲಹ ಹಿನ್ನಲೆ: ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ!

Date:

ಕೌಟುಂಬಿಕ ಕಲಹ ಹಿನ್ನಲೆ: ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ!

ಹಾಸನ: ಕೌಟುಂಬಿಕ ಕಲಹ ಹಿನ್ನಲೆ ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗನಾಗಿದ್ದು,
ಕಳೆದ ಎಂಟು ತಿಂಗಳ ಹಿಂದೆಯಷ್ಟೆ ಭರತ್ ಅರಸೀಕೆರೆ ತಾಲ್ಲೂಕು, ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿದ್ದನು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...