ಕ್ಯೂ ಇದ್ರೆ ಟೋಲ್ ಕಟ್ಟುವ ಅಗತ್ಯವಿಲ್ಲ!

Date:

ವಾಹನ ಸವಾರರಿಗೆ ಗುಡ್‌ನ್ಯೂಸ್ ಇಲ್ಲಿದೆ. ಟೋಲ್ ಪ್ಲಾಜಾಗಳಲ್ಲಿ ಕ್ಯೂ ನಿಂತು ಕಿರಿಕಿರಿ ಅನುಭವಿಸುವ ಕಾಲ ದೂರವಾಗುವ ಸೂಚನೆ ಸಿಕ್ಕಿದೆ. ಇನ್ಮುಂದೆ 100 ಮೀಟರ್‌ಗಿಂತ ಹೆಚ್ಚು ದೂರ ವಾಹನಗಳ ಕ್ಯೂ ಇದ್ರೆ ಟೋಲ್ ಪ್ಲಾಜಾಗಳಲ್ಲಿ ಟೋಲ್ ಫೀ ಕಟ್ಟಬೇಕಾಗಿಲ್ಲ. ಟೋಲ್ ಪ್ಲಾಜಾಗಳಿಂದ 100 ಮೀಟರ್ ದೂರದಲ್ಲಿ ಹಳದಿ ರೇಖೆಯನ್ನು ಎಳೆದಿರಲಾಗುತ್ತದೆ. ಆ ರೇಖೆಗಿಂತಲೂ ಹೆಚ್ಚು ವಾಹನಗಳು ಕ್ಯೂನಲ್ಲಿದ್ದರೆ ಆ ವಾಹನಗಳಿಗೆ ಟೋಲ್‌ನಲ್ಲಿ ತೆರಿಗೆ ಪಾವತಿಸಬೇಕಾಗಿಲ್ಲ. ವಾಹನಗಳು ಸರಾಗವಾಗಿ ಸಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹಾಗಂದ ಮಾತ್ರಕ್ಕೆ ಈ ನಿಯಮ ಹೊಸತೇನೂ ಅಲ್ಲ. ಎರಡು ವರ್ಷಗಳ ಹಿಂದೆ ಆರ್‌ಟಿಐ ಮೂಲಕ ಕೇಳಲಾದ ಮಾಹಿತಿಯಲ್ಲಿ ಟೋಲ್ ಪ್ಲಾಜಾಗಳಲ್ಲಿ 3 ನಿಮಿಷಕ್ಕಿಂತ ಹೆಚ್ಚು ಕಾಯುವಂತಾಗಬಾರದು ಎಂಬ ನಿಯಮವಿದೆ. ಆದರೆ ಈ ನಿಯಮಗಳು ವಾಸ್ತವದಲ್ಲಿ ಜಾರಿಯಾಗಿಲ್ಲ, ಜನರಿಗೆ ಈ ಬಗ್ಗೆ ಯಾವುದೇ ಅರಿವು ಇಲ್ಲ.

ಇತ್ತೀಚೆಗಷ್ಟೇ ದೇಶಾದ್ಯಂತ ಒಂದು ವರ್ಷದೊಳಗೆ ಎಲ್ಲಾ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಿರುವ ಟೋಲ್ ಬೂತ್‌ಗಳನ್ನು ತೆಗೆದುಹಾಕಿ, ಜಿಪಿಎಸ್‌ ಮೂಲಕ ಟೋಲ್ ಸಂಗ್ರಹ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಮೂಲಕ ರಾ. ಹೆದ್ದಾರಿಗಳಲ್ಲಿ ವಾಹನ ಸಂಚಾರ ಮತ್ತಷ್ಟು ಸರಾಗಗೊಳ್ಳಲಿದೆ. 2016ರಲ್ಲಿ ಮೊದಲ ಬಾರಿಗೆ ಫಾಸ್ಟ್‌ಟ್ಯಾಗ್ ಅನ್ನು ಪರಿಚಯಿಸಲಾಯಿತು. ಆದರೆ ಫೆಬ್ರವರಿ 16, 2021 ರಿಂದ, ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ಎಲೆಕ್ಟ್ರಾನಿಕ್ ಟೋಲ್ ಪ್ಲಾಜಾಗಳಲ್ಲಿ ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...