ಕ್ರಿಕೆಟ್‌ ಮೇಲೂ ಪರಿಣಾಮ ಬೀರಿದ ಒಮಿಕ್ರಾನ್!

Date:

ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರದ ಬೆದರಿಕೆಯ ನಡುವೆ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ಎಜಿಎಂನಲ್ಲಿ ಮಂಡಳಿಯು ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಸದ್ಯ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ನಡೆಯುತ್ತಿದೆ.

ಟೆಸ್ಟ್ ಪಂದ್ಯ ಮುಗಿದ ನಂತ್ರ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲಿದೆ. ಒಮಿಕ್ರಾನ್ ಮಧ್ಯೆಯೇ ಟೀಂ ಇಂಡಿಯಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಹೇಳಿದೆ. ಆದ್ರೆ ಪಂದ್ಯದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

ಸುಮಾರು 7 ವಾರಗಳ ಟೀಂ ಇಂಡಿಯಾ ಪ್ರವಾಸ ನಡೆಸಲಿದ್ದು, 3 ಟೆಸ್ಟ್, 3 ಏಕದಿನ ಪಂದ್ಯ ಮತ್ತು 4 ಟಿ-20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಾಗಿತ್ತು. ಆದರೆ ಈಗ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸುದ್ದಿ ಸಂಸ್ಥೆಗೆ ಈ ಮಾಹಿತಿ ನೀಡಿದ್ದಾರೆ. ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿದೆ. ಅಲ್ಲಿ 3 ಟೆಸ್ಟ್ ಮತ್ತು 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಟಿ 20 ಅಂತಾರಾಷ್ಟ್ರೀಯ ಪಂದ್ಯಗಳನ್ನು ನಂತರ ಆಡಲಿದ್ದಾರೆಂದು ಅವರು ಹೇಳಿದ್ದಾರೆ.

ಒಮಿಕ್ರಾನ್ ರೂಪಾಂತರದಿಂದಾಗಿ ವೇಳಾಪಟ್ಟಿಯನ್ನು ಮೊಟಕುಗೊಳಿಸಬೇಕಾಗಿದೆ. ಭದ್ರತೆಯ ದೃಷ್ಟಿಯಿಂದ ಭಾರತೀಯ ಆಟಗಾರರು ಕಟ್ಟುನಿಟ್ಟಾದ ಕ್ವಾರಂಟೈನ್ ನಲ್ಲಿರಲಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...