ಟೀಂ ಇಂಡಿಯಾ ಟಿ20 ವಿಶ್ವ ಚಾಂಪಿಯನ್ ಆಗಿರುವ ಸಂತಸ ಅಭಿಮಾನಿಗಳ ಮನದಲ್ಲಿ ಮೂಡಿದ್ದರೆ, ತಂಡದಲ್ಲಿನ ಅನುಭವಿ ಆಟಗಾರರ ವಿದಾಯದ ಪರ್ವ ಒಂದರ ಹಿಂದೆ ಒಂದರಂತೆ ಬರಸಿಡಿಲಿನಂತೆ ಬಂದೆರಗುತ್ತಿದೆ. ನಿನ್ನೆ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸ್ವಲ್ಪ ಸಮಯದ ನಂತರ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಈ ಸ್ವರೂಪಕ್ಕೆ ವಿದಾಯ ಹೇಳಿದ್ದರು.
ಇದೀಗ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಸಹ ನೀಲಿ ಜೆರ್ಸಿಯನ್ನು ಶಾಶ್ವತವಾಗಿ ತೊರೆಯುವುದಾಗಿ ಘೋಷಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಟಿ20 ವಿಶ್ವಕಪ್ ಟ್ರೋಫಿಯೊಂದಿಗಿರುವ ಫೋಟೋವನ್ನು ಶೇರ್ ಮಾಡುವ ಮೂಲಕ ಜಡೇಜಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.