ಡೇವಿಡ್ ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಇಬ್ಬರೂ ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಆಟಗಾರರು. ಸದ್ಯ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರೆ, ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಮುಂದಿನ ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿಕೊಳ್ಳಲಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಅವರ ವಿಶೇಷ ಫೋಟೋವೊಂದು ವೈರಲ್ ಆಗಿದೆ.
ಹೌದು ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ರಂಜಾನ್ ಹಬ್ಬ ಹತ್ತಿರ ಬರುತ್ತಿರುವ ಕಾರಣ ಉಪವಾಸವನ್ನು ಆರಂಭಿಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಇಬ್ಬರು ಕ್ರಿಶ್ಚಿಯನ್ ಆಗಿದ್ದರೂ ಸಹ ರಂಜಾನ್ ಹಬ್ಬಕ್ಕಾಗಿ ಉಪವಾಸ ಆರಂಭಿಸಿರುವುದಕ್ಕೆ ಒಂದು ಕಾರಣವಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರಾದ ರಶೀದ್ ಖಾನ್ , ಮೊಹಮ್ಮದ್ ನಬಿ, ಮುಜೀಬ್ ಉರ್ ರೆಹಮಾನ್ ಮತ್ತು ಖಲೀಲ್ ಅಹ್ಮದ್ ಭಾನುವಾರದಿಂದ ರಂಜಾನ್ ಹಬ್ಬದ ಉಪವಾಸವನ್ನು ಆರಂಭಿಸಿದ್ದಾರೆ.
ಹೀಗಾಗಿ ಡೇವಿಡ್ ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಕೂಡ ತಮ್ಮ ಸಹ ಆಟಗಾರರ ಜೊತೆ ಉಪವಾಸವನ್ನು ಆರಂಭಿಸಿದ್ದಾರೆ. ಈ ವಿಷಯವನ್ನು ರಶೀದ್ ಖಾನ್ ತಮ್ಮ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದು ಕೇನ್ ವಿಲಿಯಮ್ಸನ್ ಮತ್ತು ಡೇವಿಡ್ ವಾರ್ನರ್ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.